ದೊಡ್ಡಬಳ್ಳಾಪುರ: ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ₹7 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ ಮುನಿರಾಜು ಗುದ್ದಲಿ ಪೂಜೆ ನೆರವೇರಿಸಿದರು.
ಕಾಂಕ್ರಿಟ್ ರಸ್ತೆ, ಆರೂಡಿ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಭಾಂಗಣ, ಭಕ್ತರಹಳ್ಳಿಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಸೇರಿದಂತೆ ಹಲವಾರು ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಬಗ್ಗೆ ಶಾಸಕ ಧೀರಜ್ ಮುನಿರಾಜು ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳಲ್ಲಿ ₹7 ಕೋಟಿ ಅನುದಾನ ಕ್ಷೇತ್ರದ ಅಭಿವೃದ್ಧಿಗೆ ಬಿಡುಗಡೆಯಾಗಿದೆ. ತಾಲ್ಲೂಕಿನಲ್ಲಿ ತುರ್ತಾಗಿ ಆಗಬೇಕಿರುವ ಕೆಲಸಗಳ ಪಟ್ಟಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಮುಖಂಡರಿಂದ ಪಡೆದು ಆದ್ಯತೆಯ ಮೇರೆಗೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಯಾವುದೇ ತಾರತಮ್ಯ ಇಲ್ಲದೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ಮಾಹಿತಿ ಮೇರೆಗೆ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.