ADVERTISEMENT

ಕಾರ್ಯಕರ್ತೆಯರಿಗೆ ಸುರಕ್ಷತಾ ಕಿಟ್‌

ಕೊರೊನಾ ವಾರಿಯರ್ಸ್‌ಗಳಿಗೆ ಔಷಧಿ ವ್ಯಾಪಾರಿಗಳ ಸಂಘದಿಂದ ಪರಿಕರ ವಿತರಣೆ

​ಪ್ರಜಾವಾಣಿ ವಾರ್ತೆ
Published 20 ಮೇ 2021, 3:43 IST
Last Updated 20 ಮೇ 2021, 3:43 IST
ವಿಜಯಪುರದ ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿಯ ಆವರಣದಲ್ಲಿ ಔಷಧಿ ವ್ಯಾಪಾರಿಗಳ ಸಂಘದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಸಮಾಲೋಚನೆ ನಡೆಸಿದರು
ವಿಜಯಪುರದ ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿಯ ಆವರಣದಲ್ಲಿ ಔಷಧಿ ವ್ಯಾಪಾರಿಗಳ ಸಂಘದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ಕಿಟ್ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಸಮಾಲೋಚನೆ ನಡೆಸಿದರು   

ದೇವನಹಳ್ಳಿ/ವಿಜಯಪುರ: ಕೋವಿಡ್ ಸೋಂಕಿನ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆಗೆ ಮುಂದಾಗಿರುವ ಅಂಗನವಾಡಿ ಕಾರ್ಯಕರ್ತೆಯರು, ತಮ್ಮ ಆರೋಗ್ಯದ ಕಡೆಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀನಿವಾಸ್ ಹೇಳಿದರು.

ಪಟ್ಟಣದ ಸರ್ಕಲ್ ಇನ್‌ಸ್ಪೆಕ್ಟರ್ ಕಚೇರಿಯ ಆವರಣದಲ್ಲಿ ಔಷಧಿ ವ್ಯಾಪಾರಿಗಳ ಸಂಘದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ ಸುರಕ್ಷತಾ ಕಿಟ್‌ಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಔಷಧಿ ವ್ಯಾಪಾರಿಗಳ ಸಂಘದಿಂದ ಮುಖಗವಸು, ಕೈ ಗವಸು, ಸ್ಯಾನಿಟೈಸರ್, ಔಷಧಿಗಳನ್ನು ನೀಡಲಾಗಿದೆ. ಇವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದರು.

ADVERTISEMENT

ಪುರಸಭಾ ಮುಖ್ಯಾಧಿಕಾರಿ ಎ.ಬಿ.ಪ್ರದೀಪ್ ಕುಮಾರ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಸೌಲಭ್ಯ ಹಾಗೂ ವಿಮೆ ಸೌಲಭ್ಯ ಕಲ್ಪಿಸುವ ಕುರಿತು ಜಿಲ್ಲಾಧಿಕಾರಿಯೊಂದಿಗೆ ಚರ್ಚೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಕಾರ್ಯಗತಗೊಳಿಸಲು ಅಗತ್ಯವಿರುವ ಪ್ರಯತ್ನಗಳನ್ನು ಮಾಡಲಾಗುತ್ತದೆ ಎಂದರು.

‘ನಾವು ಸಾಕಷ್ಟು ಕಷ್ಟಪಟ್ಟು ಕೋವಿಡ್ ನಿರ್ಮೂಲನೆಗಾಗಿ ಶ್ರಮಿಸುತ್ತಿದ್ದೇವೆ. ಆದರೆ, ಆರೋಗ್ಯ ಇಲಾಖೆಯಿಂದ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಆಸ್ಪತ್ರೆಗೆ ಹೋದರೆ ಒಂದೇ ಒಂದು ಮಾಸ್ಕ್ ಕೊಡುವುದಿಲ್ಲ. ನಮ್ಮನ್ನು ದೌರ್ಜನ್ಯವಾಗಿ ಮಾತನಾ
ಡುತ್ತಾರೆ’ ಎಂದು ಅಂಗನವಾಡಿ ಕಾರ್ಯಕರ್ತೆಯರು ದೂರಿದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಸ್.ಭಾಸ್ಕರ್, ಔಷಧಿ ವ್ಯಾಪಾರಿಗಳ ಸಂಘದ ಮುಖಂಡ ಪ್ರಭುದೇವ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹಿಳಾ ಶಕ್ತಿ ಕೇಂದ್ರದ ಜಿಲ್ಲಾ ಸಂಯೋಜಕಿ ಸೌಮ್ಯಾ ಜೆ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.