
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ದೇವಾಲಯದ ಮುಂದೆ ಮಂಗಳವಾರ ಡಿಕೆಶಿ ಅವರು ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ 1,001 ತೆಂಗಿನ ಕಾಯಿ ಹೊಡೆಯಲಾಯಿತು
ದೊಡ್ಡಬಳ್ಳಾಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಶರತ್ ಪಟೇಲ್ ನೇತೃತ್ವದಲ್ಲಿ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಮುಂದೆ ಮಂಗಳವಾರ 1,001 ತೆಂಗಿನ ಕಾಯಿಗಳನ್ನು ಹೊಡೆಯಲಾಯಿತು.
‘ಪಕ್ಷಕ್ಕಾಗಿ ದುಡಿದಿರುವ ಎಲ್ಲರಿಗೂ ಅವಕಾಶಗಳು ದೊರೆಯಬೇಕು. ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನ ಘಾಟಿ ಕ್ಷೇತ್ರದಲ್ಲಿ ಅದ್ದೂರಿಯಾಗಿ ಪೂಜೆ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಅಧ್ಯಕ್ಷ ಶರತ್ ಪಟೇಲ್ ತಿಳಿಸಿದರು.
ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ಯಶವಂತ್, ದೊಡ್ಡಬಳ್ಳಾಪುರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೇರಳಘಟ್ಟ ರಾಕೇಶ್‌ಗೌಡ, ತಾಲ್ಲೂಕು ಉಪಾಧ್ಯಕ್ಷ ಶ್ರವಣೂರು ರಾಜೇಶ್, ತೂಬಗೆರೆ ಬ್ಲಾಕ್ ಅಧ್ಯಕ್ಷ ನರಸಿಂಹಮೂರ್ತಿ, ಯುವ ಕಾಂಗ್ರೆಸ್ ಮುಖಂಡ ವಿನಯ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.