ADVERTISEMENT

ನಗರಸಭೆ ಚುನಾವಣೆ: ಕೋವಿಡ್‌ ಮಾರ್ಗಸೂಚಿ ಜಾರಿಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 2:34 IST
Last Updated 15 ಆಗಸ್ಟ್ 2021, 2:34 IST
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್‌ಕುಮಾರ್ ಮಾತನಾಡಿದರು
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್‌ಕುಮಾರ್ ಮಾತನಾಡಿದರು   

ದೊಡ್ಡಬಳ್ಳಾಪುರ: ನಗರಸಭೆ ಚುನಾವಣೆಯ ದಿನಾಂಕ ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಸಿದ್ಧತಾ ಕಾರ್ಯ ಆರಂಭಿಸಿದ್ದಾರೆ.

ನಗರದ ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ನಗರಸಭೆ ವಾರ್ಡ್‌ವಾರು ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಉಪವಿಭಾಗಾಧಿಕಾರಿ ಅರುಳ್‌ಕುಮಾರ್ ನೀಡಿದರು.

ತಹಶೀಲ್ದಾರ್ ಟಿ.ಎಸ್.ಶಿವರಾಜು, ಡಿವೈಎಸ್ಪಿ ಟಿ.ರಂಗಪ್ಪ,ಸಮಾಜ ಕಲ್ಯಾಣ ಇಲಾಖೆ ಸೋಮಶೇಖರ್ ಹಾಗೂ ಚುನಾವಣೆ ಶಾಖೆ ಸಿಬ್ಬಂದಿ ಭಾಗವಹಿಸಿದ್ದರು.

ADVERTISEMENT

ಚುನಾವಣಾ ವೇಳಾಪಟ್ಟಿಯಂತೆ ಆ.16ರ ಸೋಮವಾರ ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸಲಿದ್ದಾರೆ. ನಗರಸಭೆ ವ್ಯಾಪ್ತಿಯಲ್ಲಿ ಚುನಾವಣ ನೀತಿ ಸಂಹಿತೆ ಹಾಗೂ ನಾಮಪತ್ರಗಳ ಸಲ್ಲಿಕೆ ಸಮಯದಲ್ಲಿ ಕೋವಿಡ್‌ ಮಾರ್ಗ ಸೂಚಿಗಳು ಕಟ್ಟು ನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವ ಕುರಿತಂತೆ ಸೂಚನೆ ನೀಡಲಾಯಿತು. ಆ.23 ನಾಮಪತ್ರ ಸಲ್ಲಿಸಲು ಕೊನೆ ದಿನ. ಆ.24 ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ.26 ಉಮೇದುವಾರಿಕೆ ಹಿಂತಗೆದುಕೊಳ್ಳಲು ಕೊನೆ ದಿನ. ಸೆ.3ರಂದು ಬೆಳಿಗ್ಗೆ 7ಗಂಟೆಯಿಂದ ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ಸೆ.6ರಂದು ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಬೆಳಿಗ್ಗೆ 8ಗಂಟೆಯಿಂದ ಮತ ಏಣಿಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.