
ದೊಡ್ಡಬಳ್ಳಾಪುರ: ಜವಾಹರ್ ನವೋದಯ ವಿದ್ಯಾಲಯದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ಗಾಂಧಿವಾದಿ ಲ.ನರಸಿಂಹಯ್ಯ ತೊಂಡೋಟಿ ಧ್ವಜಾರೋಹಣ ನೆರವೇರಿಸಿದರು. ನಂತರ ಮಾನಾಡಿ, ಗಾಂಧೀಜಿ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಸೇವೆ, ತ್ಯಾಗ, ಬಲಿದಾನ ಬಗ್ಗೆ ಸ್ಮರಿಸಿದರು. ಸರ್ವೋದಯದ ಮಹತ್ವ ಭವಿಷ್ಯದಲ್ಲಿ ತಾವುಗಳು ದೇಶ ಸೇವೆ ಮಾಡಲು ಮುಂದಿರ ಬೇಕು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ಕಂಸಾಳೆ ಮತ್ತು ಡೊಳ್ಳು ಕುಣಿತ ಪ್ರದರ್ಶನ ನಡೆಯಿತು. ನಿತ್ಯಶ್ರೀ ಮತ್ತು ಭವಾನಿ ಅವರು ಸ್ವಾತಂತ್ರ್ಯ ಸಂಗ್ರಾಮ ಹಾಗೂ ಸ್ವಾತಂತ್ರ್ಯನಂತರ ದೇಶದ ಸಾಧನೆ ಕುರಿತು ಮಾತನಾಡಿದರು. ಅಧ್ಯಕ್ಷತೆಯನ್ನು ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯ ಟಿ.ಪಳನಿವೇಲು ವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.