ಪ್ರಥಮ್
ದೊಡ್ಡಬಳ್ಳಾಪುರ: ಶಾಂತಿ, ಸೌಹಾರ್ದ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿರುವ ಕಿರುತೆರೆ ರಿಯಾಲಿಟಿ ಶೊ ‘ಬಿಗ್ ಬಾಸ್’ ಸ್ಪರ್ಧಿಗಳಾದ ಪ್ರಥಮ್ ಹಾಗೂ ವಕೀಲ ಜಗದೀಶ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಪೊಲೀಸರಿಗೆ ದೂರು ನೀಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಪ್ರಥಮ್‌ಗೆ ಬೆದರಿಕೆ ಒಡ್ಡಿದ ವಿಷಯ ಮತ್ತು ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಕೀಲ ಜಗದೀಶ್ ವಿಡಿಯೊ ಇಲ್ಲಿನ ಸೌಹಾರ್ದತೆಗೆ ಧಕ್ಕೆ ತರುತ್ತಿವೆ ಎಂದು ವೇದಿಕೆ ಸಂಸ್ಥಾಪಕ ಅಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಆರೋಪಿಸಿದರು. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಇಬ್ಬರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.