ADVERTISEMENT

ಆಸ್ಪತ್ರೆಗೆ ವಿದ್ಯುತ್‌ ಪೂರೈಕೆ ಅಡಚಣೆ ಆಗಬಾರದು

ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಉಪವಿಭಾಗಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 2:23 IST
Last Updated 19 ಆಗಸ್ಟ್ 2025, 2:23 IST
ದೊಡ್ಡಬಳ್ಳಾಪುರದ ತಾಯಿ ಮಗು ಸರ್ಕಾರಿ ಆಸ್ಪತ್ರೆಗೆ ಸೋಮವಾರ ಉಪವಿಭಾಗಾಧಿಕಾರಿ ಎನ್‌.ದುರ್ಗಾಶ್ರೀ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು
ದೊಡ್ಡಬಳ್ಳಾಪುರದ ತಾಯಿ ಮಗು ಸರ್ಕಾರಿ ಆಸ್ಪತ್ರೆಗೆ ಸೋಮವಾರ ಉಪವಿಭಾಗಾಧಿಕಾರಿ ಎನ್‌.ದುರ್ಗಾಶ್ರೀ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದರು   

ದೊಡ್ಡಬಳ್ಳಾಪುರ:  ನಗರದ ತಾಯಿ ಮಗು ಸರ್ಕಾರಿ ಆಸ್ಪತ್ರೆಗೆ  ಅಡಚಣೆ ಇಲ್ಲದೆ ನಿರಂತರವಾಗಿ ವಿದ್ಯುತ್‌ ಪೂರೈಕೆ ಮಾಡಬೇಕೆಂದು ಉಪವಿಭಾಗಾಧಿಕಾರಿ ಎನ್‌.ದುರ್ಗಾಶ್ರೀ ಬೆಸ್ಕಾಂ ಅಧಿಕಾರಿಗಳು ಸೂಚಿಸಿದರು.

ನಗರದ ತಾಯಿ ಮಗು ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಆಸ್ಪತ್ರೆಯಿಂದ ಬೆಸ್ಕಾಂಗೆ ವಿದ್ಯುತ್‌ ಶುಲ್ಕ ಪಾವತಿ ಬಾಕಿ ಉಳಿದಿದೆ. ಹೆಚ್ಚಿನ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಆದರೆ ಇದನ್ನೇ ನೆಪವಾಗಿಸಿಕೊಂಡು ಆಸ್ಪತ್ರೆಗೆ ವಿದ್ಯುತ್‌ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗಬಾರದು ಎಂದರು.

ADVERTISEMENT

ಆಸ್ಪತ್ರೆಯ ಶೌಚಾಲಯ ಸೇರಿದಂತೆ ಇತರೆಡೆಗಳಿಗೆ ನೀರು ಸರಬರಾಜು ಆಗುತ್ತಿರುವ ಪೈಪ್‌ಲೈನ್‌ಗಳ ದುರಸ್ಥಿಯನ್ನು ಆದ್ಯತೆ ಮೇರೆಗೆ ನಡೆಸಲಾಗುವುದು. ರೋಗಗಳಿನ್ನು ಕರೆದುಕೊಂಡು ಬರುವವರಿಗೆ ವಾಹನ ನಿಲ್ಲಿಸಲು ಅನುಕೂಲವಾಗುವಂತೆ ಆಸ್ಪತ್ರೆ ಸಮೀಪ ರಸ್ತೆ ವಿಸ್ತರಣೆ ಹಾಗೂ ಡಾಂಬರೀಕರಣಕ್ಕೆ ಸಾರ್ವಜನಿಕರಿಂದ ಮನವಿಗಳು ಬಂದಿವೆ.  ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖೆಗೆ ಸೂಚನೆ ನೀಡಿದರು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಶಾರದ,ಆಸ್ಪತ್ರೆ ಆಡಳಿತ ಅಧಿಕಾರಿ ಡಾ.ರಮೇಶ್‌, ಆಸ್ಪತ್ರೆಯ ವೈದ್ಯರಾದ ಡಾ.ಪರಮೇಶ, ಡಾ.ಅರುಣ್‌ಕುಮಾರ್‌, ಬೆಸ್ಕಾಂ ಸಹಾಯಕ ಎಂಜಿನಿಯರ್‌ ಉಮಾಶಂಕರ್‌, ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ಕಿರಣ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.