
ಪ್ರಜಾವಾಣಿ ವಾರ್ತೆಸಾಂದರ್ಭಿಕ ಚಿತ್ರ
ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ದೊಡ್ಡಬಳ್ಳಾಪುರ ತಾಲ್ಲೂಕು ಭೋವಿ ಜನಾಂಗ ಸಂಘ ಅರ್ಜಿ ಆಹ್ವಾನಿಸಿದೆ.
ತಾಲ್ಲೂಕಿನ ಹಾಗೂ ನಗರದಲ್ಲಿ ವಿದ್ಯಾಭ್ಯಾಸ ಮಾಡಿದ, ಶೇ 85 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಜ.10ರ ಒಳಗೆ ಅಂಕಪಟ್ಟಿಯೊಂದಿಗೆ ಸಂಘದ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಜ.14 ರಂದು ಬೆಳಗ್ಗೆ 11.30ಕ್ಕೆ ನಗರದ ಸಂಘದ ಕಚೇರಿಯಲ್ಲಿ ನಡೆಯಲಿರುವ ಸಿದ್ದರಾಮೇಶ್ವರ 851ನೇ ಜನ್ಮ ದಿನಾಚರಣೆಯಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ 98452 22295.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.