ADVERTISEMENT

ದೊಡ್ಡಬಳ್ಳಾಪುರ: ಸುಬ್ರಹ್ಮಣ್ಯ ದೇಗುಲದ ಹುಂಡಿಯಲ್ಲಿ ₹62 ಲಕ್ಷ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2023, 14:44 IST
Last Updated 30 ಡಿಸೆಂಬರ್ 2023, 14:44 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆದ ಹುಂಡಿಯಲ್ಲಿ ಹಣ ಎಣಿಕೆಯಲ್ಲಿ ಭಾಗವಹಿಸಿದ್ದ ಭಕ್ತರು
ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ಶನಿವಾರ ನಡೆದ ಹುಂಡಿಯಲ್ಲಿ ಹಣ ಎಣಿಕೆಯಲ್ಲಿ ಭಾಗವಹಿಸಿದ್ದ ಭಕ್ತರು    

ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಶನಿವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ₹62,47,075 ಹಣ ಸಂಗ್ರಹವಾಗಿದೆ.

ಇದರೊಂದಿಗೆ ₹66,600 ಮೌಲ್ಯದ 1 ಕೆ.ಜಿ 500 ಗ್ರಾಂ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ. ದೇವಾಲಯದ ಆವರಣದಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ನಾಗರಾಜು, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ಸಿಬ್ಬಂದಿ ನಂಜಪ್ಪ ಸೇರಿದಂತೆ ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ ಹಾಗೂ ಪೊಲೀಸರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.