ADVERTISEMENT

ಕನ್ನಡ ಮನಸ್ಸುಗಳ ಗೆದ್ದ ದ್ವಾರಕೀಶ್‌

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2024, 17:02 IST
Last Updated 17 ಏಪ್ರಿಲ್ 2024, 17:02 IST
ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಬುಧವಾರ ಕನ್ನಡದ ಹಿರಿಯ ನಟ ದಿವಂಗತ ದ್ವಾರಕೀಶ್ ನುಡಿನಮನ ನಡೆಯಿತು
ದೊಡ್ಡಬಳ್ಳಾಪುರ ಕನ್ನಡ ಜಾಗೃತ ಭವನದಲ್ಲಿ ಬುಧವಾರ ಕನ್ನಡದ ಹಿರಿಯ ನಟ ದಿವಂಗತ ದ್ವಾರಕೀಶ್ ನುಡಿನಮನ ನಡೆಯಿತು   

ದೊಡ್ಡಬಳ್ಳಾಪುರ: ಕನ್ನಡ ಚಲನಚಿತ್ರ ರಂಗದಲ್ಲಿ ನಟ, ನಿರ್ದೇಶಕ, ನಿರ್ಮಾಪಕ, ವಿತರಕ ಹೀಗೆ ಬಹುಮುಖ ಪ್ರತಿಭೆಯೊಂದಿಗೆ ಚಿತ್ರ ರಂಗದಲ್ಲಿ ಸಕ್ರಿಯರಾಗಿದ್ದ ದ್ವಾರಕೀಶ್‌ ಅವರು ಕನ್ನಡಿಗರ ಮನದಲ್ಲಿ ಚೀರ ಸ್ಮರಣೀಯವಾಗಿದ್ದಾರೆ ಎಂದು ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕ ಮತ್ತು ಕನ್ನಡ ಜಾಗೃತ ಪರಿಷತ್ತು ಸಹಯೋಗದಲ್ಲಿ ಕನ್ನಡ ಜಾಗೃತ ಭವನದಲ್ಲಿ ಬುಧವಾರ ನಡೆದ ಕನ್ನಡದ ಹಿರಿಯ ನಟ ದ್ವಾರಕೀಶ್ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚಲನಚಿತ್ರಗಳಲ್ಲಿ ನಾಯಕ ನಟನಿಗೆ ದೊರೆಯುವ ಪ್ರಾಮುಖ್ಯತೆ ಹಾಸ್ಯನಟನಿಗೂ ದೊರೆಯುವಂತೆ ಆಗಿದ್ದು ದ್ವಾರಕೀಶ್ ಮತ್ತಿತರರ ಹಾಸ್ಯ ನಟರಿಂದ. ಕನ್ನಡ ಚಿತ್ರರಂಗವನ್ನು ಎತ್ತರಕ್ಕೆ ಕೊಂಡೊಯ್ದವರಲ್ಲಿ ದ್ವಾರಕೀಶ್ ಅವರ ಶ್ರಮವು ಮಹತ್ವದ್ದಾಗಿದೆ ಎಂದರು.

ADVERTISEMENT

ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ದ್ವಾರಕೀಶ್ ಕನ್ನಡ ಚಿತ್ರರಂಗಕ್ಕೆ ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದವರು. ವಿದೇಶಗಳಲ್ಲಿ ಚಿತ್ರೀಕರಣ ಮಾಡುವ ಮೂಲಕ‌ ಕನ್ನಡ ಚಿತ್ರರಂಗದ ವ್ಯಾಪ್ತಿಯನ್ನು ವಿಸ್ತರಿಸಿದರು. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿದ ದ್ವಾರಕೀಶ್ ತಮ್ಮ ಸ್ವಂತ ಜೀವನದಲ್ಲಿ ಸಾಕಷ್ಟು ನೋವು ನಲಿವು ಕಂಡವರು ಎಂದರು.

ಕನ್ನಡ ಪಕ್ಷದ ಮುಖಂಡ ಸಂಜೀವವಾಯಕ್ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ಗೋವಿಂದರಾಜು, ಕೋಶಾಧ್ಯಕ್ಷ. ಸಾ.ಲ.ಕಮಲನಾಥ್, ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜುಶಿರವಾರ, ಕನ್ನಡ ಜಾಗೃತ ಪರಿಷತ್‌ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಮುನಿಪಾಪಣ್ಣ, ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತರ ವೆಂಕಟರಾಜು, ಕನ್ನಡ ಸಂಘಟನೆಯ ಪದಾಧಿಕಾರಿಗಳಾದ ಸೂರ್ಯನಾರಾಯಣ್, ದರ್ಗಾಜೋಗಿಹಳ್ಳಿ ಮಲ್ಲೇಶ್, ಜನಪರ ಚಂದ್ರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.