ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು ಹೋಬಳಿಯ ಸೂಲುಕುಂಟೆ ಗ್ರಾಮದಲ್ಲಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಗ್ರಾಮಸ್ಥರ ನಿದ್ದೆ ಕೆಡಿಸಿದ್ದ ಚಿರತೆ ಬೋನಿನಲ್ಲಿ ಸೆರೆಯಾಗಿದ್ದು ಗ್ರಾಮಸ್ಥರು ನಿಟ್ಟಿಸಿರು ಬಿಡುವಂತಾಗಿದೆ.
ಸುಮಾರು ಎರಡು ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು, ಸಾಕು ಪ್ರಾಣಿಗಳ ರಕ್ಷಣೆಗೆ ಗ್ರಾಮಸ್ಥರೇ ಕಳೆದೆರಡು ದಿನಗಳ ಹಿಂದೆ ತಂದಿಡಲಾಗಿದ್ದ ಬೋನಿಗೆ ಚಿರತೆ ಬಿದ್ದಿದೆ.
ಸುಮಾರು ಒಂದು ತಿಂಗಳಿಂದಲು ಹಾವಳಿ ನೀಡುತ್ತ ಮನೆ ಬಳಿಯೇ ಬಂದು ಸಾಕು ಪ್ರಾಣಿಗಳ ಹೊತ್ತೊಯ್ಯುವ ಮೂಲಕ ಗ್ರಾಮಸ್ಥರಲ್ಲಿ ಆತಂಕವನ್ನು ಮೂಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.