ದೊಡ್ಡಬಳ್ಳಾಪುರ: ತಾಲ್ಲೂಕಿನ ಮೂಲಕ ಹಾದು ಹೋಗಿರುವ ದಾಬಸ್‌ಪೇಟೆ-ಹೊಸಕೋಟೆ ರಾಷ್ಟ್ರೀಯ 648ರ ಸೋಮವಾರ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಗಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಹಾಗೂ ಕ್ಯಾಂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿ ಮಹಾರಾಷ್ಟ್ರದ ಕ್ಯಾಂಟರ್ ಚಾಲಕ ಸುನೀಲ್, ಸಹಾಯಕ ಲಾಲ್ ಮುನೇಶ್ ಅವರ ಸ್ಥಿತಿ ಗಂಭೀರವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಬಸ್‌ಪೇಟೆ ಕಡೆಯಿಂದ ಹೊಸಕೋಟೆ ಕಡೆಗೆ ತೆರಳುತ್ತಿದ್ದ ಕ್ಯಾಂಟರ್‌ಗೆ ವಿರುದ್ಧ ದಿಕ್ಕಿನಲ್ಲಿ ಬಂದ ಮಣ್ಣು ತಿಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
‘ಇಲ್ಲಿ ಅಪಘಾತ ನಡೆಯುವ ಸ್ಥಳವೇ ಅಲ್ಲ. ಆದರೆ ಲಾರಿ ವಿರುದ್ಧ ದಿಕ್ಕಿನಲ್ಲಿ ಬಂದಿರುವುದೇ ಅಪಘಾತಕ್ಕೆ ಕಾರಣವಾಗಿದೆ’ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಮೆಂಟ್ ಬಲ್ಕರ್ ಪಲ್ಟಿ: ಇದೇ ರಾಷ್ಟ್ರೀಯ ಹೆದ್ದಾರಿಯ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಮಧುರನಹೊಸಹಳ್ಳಿ ಗೇಟ್ ಸಮೀಪ ದಾಬಸ್‌ಪೇಟೆ ಕಡೆಗೆ ತೆರಳುತ್ತಿದ್ದ ಸಿಮೆಂಟ್ ಬಲ್ಕರ್ ಲಾರಿಯ ಟೈರ್ ಸ್ಪೋಟಗೊಂಡ ಪರಿಣಾಮ ರಸ್ತೆ ವಿಭಜಕದ ಮೇಲೆ ಸಾಗಿ ಸರ್ವೀಸ್ ರಸ್ತೆಯಲ್ಲಿ ಪಲ್ಟಿ ಹೊಡೆದಿದೆ.
ಅದೃಷ್ಟವಶಾತ್ ಈ ಘಟನೆ ನಡೆದ ವೇಳೆ ಸರ್ವೀಸ್ ರಸ್ತೆಯಲ್ಲಿ ಯಾವುದೇ ವಾಹನಗಳು ಬರದೇ ಇದ್ದ ಕಾರಣ ದೊಡ್ಡ ಪ್ರಮಾದ ತಪ್ಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.