
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 648ರ ಓಬದೇನಹಳ್ಳಿ ಬಳಿ ಮುಂದೆ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕಂಟೇನರ್ ಡಿಕ್ಕಿ ಹೊಡೆದಿದೆ. ಕಂಟೇನರ್ ಲಾರಿ ಚಾಲಕ ಗಾಯಗೊಂಡಿದ್ದಾನೆ.
ಶುಕ್ರವಾರ ಬೆಳಗ್ಗೆ ನೆಲಮಂಗಲ ಕಡೆಯಿಂದ ದೇವನಹಳ್ಳಿ ಕಡೆಗೆ ತೆರಳುವ ವೇಳೆ ಓಬದೇನಹಳ್ಳಿ ಬಳಿ ಲಾರಿಗೆ ಮಳೆಯ ಕಾರಣದಿಂದ ಕಂಟೇನರ್ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.