ದೊಡ್ಡಬಳ್ಳಾಪುರ: ನಗರದ ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.
ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ವಿವಿಧ ರೀತಿಯ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು. ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭ ಮತ್ತು ಶೀಘ್ರವಾಗಿ ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರಲಿದ್ದಾರೆ ಎಂದು ತಿಳಿಸಿದರು.
ಲೋಕ್ ಅದಾಲತ್ ಜಿಲ್ಲೆಯ ಹಾಗೂ ಪ್ರತಿಯೊಂದು ತಾಲ್ಲೂಕಿನ ನ್ಯಾಯಾಲಯಗಳಲ್ಲಿಯೂ ನಡೆಯಲಿದೆ. ಅದಾಲತ್‌ನಲ್ಲಿ ಇತ್ಯರ್ಥವಾಗುವ ಪ್ರಕರಣಗಳ ಕುರಿತು ಮತ್ತೆ ಮೇಲ್ಮನವಿಯನ್ನು ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದರು.
ಲೋಕ್ ಅದಾಲತ್‌ಗೆ ಸಂಬಂಧಿಸಿದಂತೆ ಯಾವುದಾದರೂ ಪ್ರಶ್ನೆಗಳಿದ್ದರೆ ಇ-ಮೈಲ್ dlsablrruralgmail.com, dlsabrdruralgmail.comಗೆ ಸಂಪರ್ಕಿಸಬಹುದು. ಸದಸ್ಯ ಕಾರ್ಯದರ್ಶಿಯ ಕಚೇರಿ ದೂ.080-22222919 ಸಹ ಸಂಪರ್ಕಿಸಬಹುದು ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಸೇನ್ ಬಾಗಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.