ದೊಡ್ಡಬಳ್ಳಾಪುರ: ಹೊಸ ವರ್ಷಾಚರಣೆಯ ರಾತ್ರಿ ತಾಲ್ಲೂಕಿನ ವಿವಿಧೆಡೆ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ತಪಸೀಹಳ್ಳಿ ಬಳಿ ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗೌರಿಬಿದನೂರು ತಾಲ್ಲೂಕಿನ ಕೆಂಕರೆ ಗ್ರಾಮದ ಭರತ್‌ಕುಮಾರ್(24), ನಿತಿನ್(19) ಮೃತರು.
ಬೈಕ್ ಅಪಘಾತ: ತಾಲ್ಲೂಕಿನ ಮಧುರೆ ಬಳಿ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಸವಾರ ಗಾಯಗೊಂಡಿದ್ದಾರೆ. ಮೆಳೆಕೋಟೆಯ ದಿಲೀಪ್ ಗಾಯಗೊಂಡವರು. ಕರ್ತವ್ಯದಲ್ಲಿದ್ದ ಪೊಲೀಸರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.