
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ ಮಸೀದಿಯಿಂದ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ಸಿದ್ದಲಿಂಗಯ್ಯ ವೃತ್ತದವರೆಗೆ ಮೊಂಬತ್ತಿ ಹಿಡಿದು ಭಾನುವಾರ ಸಂಜೆ ಪ್ರತಿಭಟನ ಮೆರವಣಿಗೆ ನಡೆಸಿದರು
ದೊಡ್ಡಬಳ್ಳಾಪುರ: ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆ ಖಂಡಿಸಿ ನಗರದ ಕೋಟೆ ರಸ್ತೆಯಲ್ಲಿನ ಶಿಯಾ ಮುಸ್ಲಿಂ ಸಮುದಾಯದ ಮಸೀದಿಯಿಂದ ಸಿದ್ಧದಲಿಂಗಯ್ಯ ವೃತ್ತದವರೆಗೆ ಭಾನುವಾರ ಸಂಜೆ ಮೊಂಬತ್ತಿ ಹಿಡಿದು ಮೆರವಣಿಗೆ ನಡೆಸಿದರು.
ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆ ಖಂಡಿಸಿದ ಬರಹ, ಪೋಟೋಗಳನ್ನು ಹಿಡಿದು ಮೆರವಣಿಗೆಯಲ್ಲಿ ಸಾಗಿದ ಪ್ರತಿಭಟನಾಕಾರರು ಅಮೆರಿಕಾ,ಇಸ್ರೇಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯಲ್ಲಿ ಮಕ್ಕಳು ಸೇರಿದಂತೆ ವಯೋವೃದ್ಧರವರೆಗೂ ನೂರಾರು ಜನ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.