ಸಿದ್ದರಾಮಯ್ಯ ಡಿಕೆಶಿ
ತೂಬಗೆರೆ (ದೊಡ್ಡಬಳ್ಳಾಪುರ): ಸಚಿವ ಸಂಪುಟದಲ್ಲಿ ಚರ್ಚಿಸದೆ ಜಾತಿ ಗಣತಿ ವರದಿ ಬಗ್ಗೆ ಸರ್ಕಾರ ಆತುರದ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯನಿಗೆ ಭಾನುವಾರ ಕುಟುಂಬ ಸಮೇತ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸತ್ಯಾಂಶ ತಿಳಿದುಕೊಂಡು ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ’ ಎಂದು ಭರವಸೆ ನೀಡಿದರು.
‘ನಾನು ಇನ್ನೂ ಜಾತಿಗಣತಿ ವರದಿ ನೋಡಿಲ್ಲ. ಎರಡು ದಿನಗಳಿಂದ ಬೆಳಗಾವಿ, ಮಂಗಳೂರಿಗೆ ಹೋಗಿದ್ದೆ. ಸದನದಲ್ಲಿ ಈ ಕುರಿತು ಚರ್ಚೆ ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಕೆಲವು ರಾಜಕಾರಣಿಗಳು ತಮಗೆ ಬೇಕಾದಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.