ADVERTISEMENT

ದೊಡ್ಡಬಳ್ಳಾಪುರ | ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ: ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2025, 2:16 IST
Last Updated 30 ಡಿಸೆಂಬರ್ 2025, 2:16 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ದೊಡ್ಡಬಳ್ಳಾಪುರ: ಮಾಕಳಿ ದುರ್ಗದ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಸಿಮೆಂಟ್ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಪಾವಗಡ ತಾಲ್ಲೂಕಿನ ಗಂಗವಾರ ಗ್ರಾಮದ ಅಶೋಕ್‌(24), ತೆಲಂಗಾಣದ ಪವನ್(21) ಮೃತರು.

ADVERTISEMENT

ಭಾನುವಾರ ರಾತ್ರಿ ಲಾರಿಗೆ ಹಿಂದಿನಿಂದ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಪವನ್‌ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅಶೋಕ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.