ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿಯಲ್ಲಿ ಚಂಪಾಷಷ್ಠಿ ಅಂಗವಾಗಿ ಸೋಮವಾರ ಅಶ್ವತ್ಥಕಟ್ಟೆ ಸಮೀಪದ ನಾಗರವಿಗ್ರಹಕ್ಕೆ ಭಕ್ತರು ಪೂಜೆ ಸಲ್ಲಿಸಿದರು
ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ಘಾಟಿಯಲ್ಲಿ ಚಂಪಾ ಷಷ್ಠಿ ಅಂಗವಾಗಿ ಸೋಮವಾರ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ನಡೆಯಿತು.
ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಯಿತು. ನೂರಾರು ಜನ ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು. ಜ.16ರಂದು ಸುಬ್ರಹ್ಮಣ್ಯಸ್ವಾಮಿ ಬ್ರಹ್ಮರಥೋತ್ಸವ ನಡೆಯಲಿದೆ. ರಥೋತ್ಸವಕ್ಕೂ ಮುನ್ನ ನಡೆಯಲಿರುವ ಜಾತ್ರೆಗೆ ಸಿದ್ಧತೆ ಪ್ರಾರಂಭವಾಗಿದ್ದು ಡಿ.25ರಿಂದ ದನಗಳ ಜಾತ್ರೆ ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.