ಸಾಂದರ್ಭಿಕ ಚಿತ್ರ
– ಐಸ್ಟಾಕ್ ಚಿತ್ರ
ದೊಡ್ಡಬಳ್ಳಾಪುರ: ತಾಲೂಕಿನ ದಾಸಗೊಂಡನಹಳ್ಳಿ ಗ್ರಾಮದ ಪುರಾತನವಾದ ಶ್ರೀಓಬಳೇಶ್ವರ ದೇವಾಲಯದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಲಾಗಿದೆ.
ದೇವಾಯಲದ ಬಾಗಿಲು ಹೊಡೆದಿರುವ ಕಳ್ಳರು ಸುಮಾರು ಎರಡು ವರ್ಷಗಳಿಂದ ಲಕ್ಷಾಂತರ ರೂಪಾಯಿ ಸಂಗ್ರಹ ಆಗಿರಬಹುದಾದ ಹುಂಡಿಯನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಈ ಹಿಂದೆಯೂ ಸಹ ದೇವಾಲಯದಲ್ಲಿ ಹುಂಡಿಯನ್ನು ಹೊಡೆದು ಕಾಣಿಕೆ ಹಣ ಕಳ್ಳತನ ಮಾಡಲಾಗಿತ್ತು. ಆದರೆ ಈಗ ಹುಂಡಿಯನ್ನೇ ಕಳ್ಳರು ಕದ್ದೋಯ್ದಿದ್ದಾರೆ. ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದೂರು ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.