
ಪ್ರಜಾವಾಣಿ ವಾರ್ತೆಅಪಘಾತ, –ಪ್ರಾತಿನಿಧಿಕ ಚಿತ್ರ
–ಪ್ರಾತಿನಿಧಿಕ ಚಿತ್ರ
ದೊಡ್ಡಬಳ್ಳಾಪುರ: ಮಂಗಳವಾರ ಸಂಜೆ ಗೌರಿಬಿದನೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿಯ ಕಂಟನಕುಂಟೆ ಸಮೀಪ ಖಾಸಗಿ ಬಸ್‌ಗೆ ಹಿಂದಿನಿಂದ ಬಂದ ಆಟೊ ಡಿಕ್ಕಿ ಹೊಡೆದು ಆಟೊದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಾಯಗೊಂಡಿರುವ ಚೀಲೇನಹಳ್ಳಿ ನಿವಾಸಿ ಮಾಲ ಎಂಬುವವರು ಸೇರಿದಂತೆ ಮೂವರು ಪ್ರಯಾಣಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್, ಕಾರ್ಮಿಕರನ್ನು ಇಳಿಸಲು ಕಂಟನಕುಂಟೆ ಬಳಿ ನಿಲ್ಲಿಸಿದ್ದ ವೇಳೆ ಆಟೊ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಆಟೊ ಸಂಪೂರ್ಣ ಜಖಂಗೊಂಡಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.