ಸಾವು
ಪ್ರಾತಿನಿಧಿಕ ಚಿತ್ರ
ದೊಡ್ಡಬಳ್ಳಾಪುರ: ತಾಲ್ಲೂಕಿನ ತೊಗರಿಘಟ್ಟ-ಸುಣ್ಣಘಟ್ಟಹಳ್ಳಿ ನಡುವೆ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ದ್ವಿಚಕ್ರ ವಾಹನ ಸವಾರ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಗಂಟಿಗಾನಹಳ್ಳಿ ನಿವಾಸಿ ಚನ್ನಕೇಶವ(19) ಮೃತರು.
ತೊಗರಿಘಟ್ಟ-ಸುಣ್ಣಘಟ್ಟಹಳ್ಳಿ ನಡುವಿನ ರಸ್ತೆ ಬದಿಯಲ್ಲಿ ಟ್ರ್ಯಾಕ್ಟರ್ ಕೆಟ್ಟು ನಿಂತಿತ್ತು. ದ್ವಿಚಕ್ರವಾಹನದಲ್ಲಿ ಬಂದ ಚನ್ನಕೇಶವ ಮಳೆಯಲ್ಲಿ ನಿಂತಿದ್ದ ಟ್ರ್ಯಾಕ್ಟರ್ ಕಾಣದೆ ಏಕಾಏಕಿ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ತಲೆಗೆ ಪೆಟ್ಟು ಬಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.