
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ತಾಲ್ಲೂಕಿನ ವರದನಹಳ್ಳಿಯಲ್ಲಿ ಮನೆವೊಂದರಲ್ಲಿ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ತನ್ಮಯ್ ದಾಸ್ (25) ಮೃತರು. ತನ್ಮಯ್ ದಾಸ್ ಪತ್ನಿಯೊಂದಿಗೆ ಮಾರಸಂದ್ರದಲ್ಲಿ ವಾಸವಿದ್ದರು. ಶುಕ್ರವಾರ ಸಂಜೆ ತಂದೆಯ ಮನೆಗೆ ಬಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.