
ದೊಡ್ಡಬಳ್ಳಾಪುರ: ನಗರದ ಮುತ್ಯಾಲಮ್ಮ ದೇವಾಲಯದ ಹಿಂಭಾಗದಲ್ಲಿನ ಮುಕ್ತಾಂಬಿಕಾ ಬಡವಾಣೆಯಲ್ಲಿ ಶಿವರಾತ್ರಿ ಆಚರಣೆಗಾಗಿ ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದಾರೆ.
ಗಿರಿಜಮ್ಮ ಸರ ಕಳೆದುಕೊಂಡವರು.
ಶನಿವಾರ ರಾತ್ರಿ ಶಿವರಾತ್ರಿ ಹಿನ್ನೆಲೆಯಲ್ಲಿ ಗಿರಿಜಮ್ಮ ಎನ್ನುವವರು ಮನೆಯ ಮುಂದೆ ರಂಗೋಲಿ ಬಿಡಿಸುವ ವೇಳೆ ಈ ಘಟನೆ ನಡೆದಿದೆ. ವಿಳಾಸ ಕೇಳುವ ನೆಪದಲ್ಲಿ ಪಲ್ಸರ್ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು, ಸುಮಾರು 40 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಕಳ್ಳರು ತೆಲುಗು ಭಾಷೆಯಲ್ಲಿ ಮಾತನಾಡುತ್ತಿದ್ದರು ಎನ್ನಲಾಗಿದ್ದು, ಇವರು ಓಡಾಡುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.