ADVERTISEMENT

ದೊಡ್ಡಬಳ್ಳಾಪುರ | ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಎನ್‌.ಮುನಿರಾಜು

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2025, 12:28 IST
Last Updated 6 ಮಾರ್ಚ್ 2025, 12:28 IST
ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಮುನಿರಾಜು
ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಮುನಿರಾಜು   

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿ ಕಂಡುಬಂದಿಲ್ಲ. ನೀರಿನ ಸಮಸ್ಯೆ ಬಗೆಹರಿಸಲು ತಾಲ್ಲೂಕು ಪಂಚಾಯಿತಿ ಸಲಹೆ ಮೇರೆಗೆ ಗ್ರಾಮ ಪಂಚಾಯಿತಿಗಳು ಅಗತ್ಯ ಕ್ರಮ ಕೈಗೊಂಡಿವೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ಮುನಿರಾಜು ತಿಳಿಸಿದರು.

ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆ ತಡೆ ಕುರಿತು ಮಾತನಾಡಿ, ತಾಲ್ಲೂಕಿನ 16 ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೋರಬಹುದು ಎಂದು ಗುರುತಿಸಲಾಗಿದೆ. ಇಲ್ಲಿ ಪರ್ಯಾಯ ಕ್ರಮಗಳ ಮೂಲಕ ನೀರು ಪೂರೈಕೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ಜೆಜೆಎಂ ಯೋಜನೆಯಡಿ ಕೊರೆಸಲಾಗಿರುವ ಕೊಳವೆಬಾವಿಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ತಡೆಯಲು ಗ್ರಾಮ ಪಂಚಾಯಿತಿಗಳಿಗೆ ಸಹಕಾರಿಯಾಗಿದೆ. ಕುಡಿಯುವ ನೀರಿ ಸಮಸ್ಯೆ ಎದಯರಾದರೆ ಜೆಜೆಎಂ ಯೋಜನೆಯಲ್ಲಿ ಕೊರೆಸಲಾಗಿರುವ ಕೊಳವೆಬಾವಿಗಳಿಗೆ ಮೋಟಾರ್‌ಗಳನ್ನು ಅಳವಡಿಸಿ ತಕ್ಷಣ ನೀರು ಪೂರೈಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.