
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ಖಾಸಗಿ ಗೋದಿ ಉಪ ಉತ್ಪನ್ನ ಕೇಂದ್ರದ ಹಳೇ ಕಟ್ಟಡಕ್ಕೆ ಬೆಂಕಿ ತಗುಲಿ 7 ಮಹಡಿ ಕಟ್ಟಡಕ್ಕೆ ಹಾನಿಯಾಗಿದೆ.
ದೊಡ್ಡಬಳ್ಳಾಪುರ- ನೆಲಮಂಗಲ ರಸ್ತೆಯ ಕನ್ನಮಂಗಲ ಗೇಟ್ ಬಳಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಪಾಳು ಬಿದ್ದಂತಿದ್ದ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹರಡಿರಬಹುದು ಎಂದು ಶಂಕಿಸಲಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.