ದೊಡ್ಡಬಳ್ಳಾಪುರ: ನಗರ ಪೊಲೀಸ್ ಠಾಣೆ ಕೂಗಳತೆಯಲ್ಲಿರುವ ಡಿ.ಕ್ರಾಸ್ ಹಾಗೂ ಅಯ್ಯಪ್ಪಸ್ವಾಮಿ ದೇವಾಲಯ ರಸ್ತೆ ಅಂಗಡಿಗಳಲ್ಲಿ ಶುಕ್ರವಾರ ರಾತ್ರಿ ಕಳ್ಳತನ ನಡೆದಿದೆ.
ಫರ್ನಿಚರ್ ಹಾಗೂ ಟೈಲ್ಸ್ ಅಂಗಡಿಗೆ ಅಳವಡಿಸಿದ್ದ ಕಬ್ಬಿಣದ ಶೀಟ್‌ಗಳನ್ನು ಕೊಯ್ದಿರುವ ದುಷ್ಕರ್ಮಿಗಳು, ಅಂಗಡಿಯಲ್ಲಿ ಹಣ ದೋಚಲು ಯತ್ನಿಸಿದ್ದಾರೆ. ಆದರೆ, ಹಣ ಸಿಗದೆ ಇದ್ದಾಗ ಎರಡು ಅಂಗಡಿಗಳಲ್ಲಿ ತಲಾ ₹50 ಸಾವಿರಕ್ಕೂ ಹೆಚ್ಚು ಮೌಲ್ಯದ ವಸ್ತುಗಳನ್ನು ನಾಶ ಮಾಡಿ ಪರಾರಿಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.