ADVERTISEMENT

ಬಾಲಕ ಅನುಮಾನಾಸ್ಪದ ಸಾವು: ದೂರು

​ಪ್ರಜಾವಾಣಿ ವಾರ್ತೆ
Published 30 ಜೂನ್ 2025, 13:00 IST
Last Updated 30 ಜೂನ್ 2025, 13:00 IST
ಹೇಮಂತ
ಹೇಮಂತ   

ದೊಡ್ಡಬಳ್ಳಾಪುರ: ಮನೆಯ ಗೃಹಪ್ರವೇಶದ ಅಡುಗೆ ಕೆಲಸಕ್ಕೆ ಬಂದಿದ್ದ ಬಾಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಪ್ರಕರಣ ನಗರದ ಜಾಲಪ್ಪ ಕಾಲೇಜು ರಸ್ತೆಯ ಅಶ್ವತ್ಥಪ್ಪ ಅವರ ಮನೆ ಸಮೀಪ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ನಿವಾಸಿ ಹೇಮಂತ (17) ಮೃತ ಬಾಲಕ. ಶಾಮಿಯಾನ ಬಿಚ್ಚಲು ಹೋಗಿ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದಾನೆ ಎಂದು ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಬಾಲಕನನ್ನು ಕೆಲಸಕ್ಕೆ ಕರೆದುಕೊಂಡು ಹೋಗಿದ್ದ ಗುತ್ತಿಗೆದಾರ ಗಂಗರಾಜು ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ ಮಗನ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.

ADVERTISEMENT

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಡುಗೆ ಗುತ್ತಿಗೆದಾರನ ವಿರುದ್ಧ ಪೋಷಕರು ದೂರು ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.