ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ಮನೆ ಬಳಿಯೇ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದ್ವಿಚಕ್ರ ಸವಾರ ನಾರಾಯಣ (25) ಮೃತಪಟ್ಟಿದ್ದು, ಹಿಟ್ ಅಂಡ್ ರನ್ ಶಂಕೆ ವ್ಯಕ್ತವಾಗಿದೆ.
ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ತೋಡಲಬಂಡೆ ಗ್ರಾಮದ ನಿವಾಸಿ ನಾರಾಯಣ ಭಾನುವಾರ ರಾತ್ರಿ ತೋಡಲಬಂಡೆ ಗ್ರಾಮದಿಂದ ಹೊರವಲಯದಲ್ಲಿರುವ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಅಪಘಾತ ನಡೆದಿದೆ. ಗಂಭೀರವಾಗಿ ಗಾಯಗೊಂಡ ನಾರಾಯಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿ ಮೃತಪಟ್ಟಿದ್ದಾನೆ ಎಂದು ಸಂಬಂಧಿಕರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಸ್ಥಳದಲ್ಲಿ ಬೈಕ್ ಒಂದು ಕಡೆ ಇದ್ದರೆ, ಅದರಿಂದ ದೂರದಲ್ಲಿ ನಾರಾಯಣ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಪೋಷಕ
ರಲ್ಲಿ ಅನುಮಾನ ಮೂಡಿಸಿದೆ. ಯಾವು
ದಾದರೂ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು
ಪರಾರಿಯಾಗಿದೆಯೇ ಎನ್ನುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ದೊಡ್ಡಬೆಳವಂಗಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.