ದೊಡ್ಡಬಳ್ಳಾಪುರ: ತಾಲ್ಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ಮಾಕಳಿ ಬಳಿ ಸೋಮವಾರ ಕಾರು-ಲಾರಿ ನಡುವೆ ನಡೆದ ಅಪಘಾತದಲ್ಲಿ ಕಾರಿನ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ಚೇತನ್(24) ಹಾಗೂ ವಸಂತ್(21) ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಕಿರಣ್, ಯಶವಂತ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾದಿಕ್ ಪಾಷಾ ತಿಳಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.