
ಪ್ರಜಾವಾಣಿ ವಾರ್ತೆ
ದೊಡ್ಡಬಳ್ಳಾಪುರ: ತಾಲ್ಲೂಕಿನ ವಿವಿಧೆಡೆಯ ಚರ್ಚೆಗಳಲ್ಲಿ ಯೇಸು ಕ್ರಿಸ್ತನ ಜನ್ಮದಿನ ಕ್ರಿಸ್‌ಮಸ್ ಆಚರಣೆಗೆ ಸಿದ್ಧತೆಗಳು ಭರದಿಂದ ನಡೆದಿದ್ದು, ಪ್ರತಿ ದಿನ ಸಂಜೆ ಸಾಮೂಹಿಕ ಪ್ರಾರ್ಥನೆಗಳು ನಡೆಯಿತ್ತಿವೆ.
ನಗರದ ಟಿ.ಬಿ.ವೃತ್ತದ ಸಮೀಪದ ಸಂತ ಪೇತ್ರರ ಚರ್ಚ್‌ನಲ್ಲಿ ಯೇಸು ಕ್ರಿಸ್ತರ ಜನನ ವೃತ್ತಾಂತ ತಿಳಿಸುವ ಬೊಂಬೆಗಳು ಹಾಗೂ ವಸ್ತು ಪ್ರದರ್ಶನ ಗಮನ ಸೆಳೆಯುವಂತೆ ನಿರ್ಮಿಸಲಾಗುತ್ತಿದೆ.
ಸಾಂತ ಕ್ಲಾಸ್ ವೇಶದಲ್ಲಿ ಮನೆಗಳಿಗೆ ಭೇಟಿ ನೀಡಿ ಯೇಸು ಪ್ರಭುವಿನ ಬಾಲ್ಯದ ಹಾಡುಗಳನ್ನು ಹಾಡುವ ಮೂಲಕ ಕ್ರಿಶ್ಚಿಯನ್ ಸಮುದಾಯವದರು ಮಕ್ಕಳೀಗೆ ಸಿಹಿ ಹಂಚಿ ಸಂಭ್ರಮಿಸುತ್ತಿರುವ ದೃಶ್ಯ ನಗರದಲ್ಲಿ ಸೋಮವಾರ ಸಂಜೆ ಕಂಡು ಬಂದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.