
ದೊಡ್ಡಬಳ್ಳಾಪುರ: ನಗರದ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ ನಿಷೇಧಿತ ಪ್ಲಾಸ್ಟಿಕ್ ಸಾಮಗ್ರಿಗಳನ್ನು ನಗರಸಭೆ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.
ಸುಮಾರು 3 ಟನ್ ಪ್ಲಾಸ್ಟಿಕ್ ಸಾಮಗ್ರಿಗಳನ್ನು ವಶ ಪಡಿಸಿಕೊಂಡಿದ್ದು, ₹25 ಸಾವಿರ ದಂಡ ವಿಧಿಸಲಾಗಿದೆ. ಕಡಿಮೆ ಮೈಕ್ರಾನ್ ಪ್ಲಾಸ್ಟಿಕ್ ಚೀಲ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರೊಂದಿಗೆ ಪ್ಲಾಸ್ಟಿಕ್ ಮಾದರಿಯ ಕೈ ಚೀಲಗಳು ಸೇರಿದಂತೆ ವಿವಿಧ ಸಾಮಗ್ರಿಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಉಲ್ಲಂಘಿಸಿದವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಜಾಗೃತಿ ಮೂಡಿಸಲಾಗಿದೆ. ಇನ್ನು ಮುಂದೆ ಇದೇ ರೀತಿಯ ತಪ್ಪು ಎಸಗಿದರೆ ದಂಡ ವಿಧಿಸುವುದರೊಂದಿಗೆ ಅಂಗಡಿ ಪರವಾನಗಿ ರದ್ದು ಪಡಿಸಲಾಗುವುದು ಎಂದು ಪೌರಾಯುಕ್ತ ಆರ್. ಕಾರ್ತಿಕೇಶ್ವರ ಹೇಳಿದರು.
ನಗರಸಭೆ ಅಧ್ಯಕ್ಷೆ ಸುಮಿತ್ರಾ.ಕೆ.ಆನಂದ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಸ್.ರವಿಕುಮಾರ್, ಪರಿಸರ ವಿಭಾಗದ ಸಹಾಯಕ ಎಂಜಿನಿಯರ್ ಈರಣ್ಣ, ಅರೋಗ್ಯ ನೀರಿಕ್ಷಕರು ಮತ್ತು ಪೌರ ಕಾರ್ಮಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.