ADVERTISEMENT

ದೊಡ್ಡಬಳ್ಳಾಪುರ | ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2026, 19:30 IST
Last Updated 16 ಫೆಬ್ರುವರಿ 2026, 19:30 IST
   

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ಇಲ್ಲಿನ ಆರ್.ಎಲ್.ಜಾಲಪ್ಪ ಅಕಾಡೆಮಿಯು ಕೆಎಎಸ್‌, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಚ್‌ 1ರಿಂದ ಉಚಿತ ತರಬೇತಿ ನೀಡಲಿದೆ.

ಬಡ ಹಾಗೂ ಗ್ರಾಮೀಣ ಯುವಜನರಿಗೆ ನಾಲ್ಕು ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಹೊರ ಊರಿನ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ.

ಆಸಕ್ತರು ಫೆ.25ರೊಳಗೆ www.rljacademy.in ನಲ್ಲಿ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ ಮೊಬೈಲ್‌ ಸಂಖ್ಯೆ 99006 06042, 97314 80759 ಸಂಪರ್ಕಿಸಲು ಅಕಾಡೆಮಿ ಕಾರ್ಯದರ್ಶಿ ಲಕ್ಷ್ಮಣ ಕೊಡಸೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.