ದೊಡ್ಡಬಳ್ಳಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ಮಸೂದೆ ವಿರೋಧಿಸಿ ನಗರದಲ್ಲಿ ಮುಸ್ಲಿಂ ಸಮುದಾಯದವರು ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.
ಶುಕ್ರವಾರ ಮಧ್ಯಾಹ್ನ ಪ್ರಾರ್ಥನೆ ಮುಗಿದ ಬಳಿಕ ಕೊಂಗಾಡಿಯಪ್ಪ ಕಾಲೇಜು ರಸ್ತೆಯ ಮೆಕ್ಕ ಮಸೀದಿಯ ಮುಂಭಾಗದಿಂದ ಬೆಸ್ಕಾಂ ಕಚೇರಿವರೆಗೆ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ ನಡೆಸಿದರು.
ಈ ವೇಳೆ ಮುಸ್ಲಿಂ ಸಮುದಾಯದ ಮುಖಂಡರಾದ ಶ್ರೀನಗರಬಶೀರ್, ಇರ್ಫಾನ್ ಅಹಮದ್ ಶರೀಫ್, ಫಯಾಜ್ ಪಾಷಾ, ಮುಶೀರ್, ಸಲೀಂ, ಅಬ್ದುಲ್ ಕಪೂರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿ ವಕ್ಫ್ ಮಸೂದೆ ವಿರುದ್ಧದ ಘೋಷಣೆಯ ಭಿತ್ತಿಪತ್ರ ಪ್ರದರ್ಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.