
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ದೊಡ್ಡಬಳ್ಳಾಪುರ: ರಾಜ್ಯ ಹೆದ್ದಾರಿಯ ಡಿ.ಕ್ರಾಸ್ ಸಮೀಪದ ಕೃಷಿ ಇಲಾಖೆ ಕಚೇರಿ ಮುಂದೆ ಮಂಗಳವಾರ ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿನ ಡಿವೈಡರ್‌ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.
ಮೃತರನ್ನು ಬಿಹಾರ ಮೂಲದ ಸನೋಜ್ ಪಂಡಿತ್ (30) ಎಂದು ಗುರುತಿಸಲಾಗಿದೆ. ಮೃತನು ರಾಜಾನುಕುಂಟೆ ನಿವಾಸಿ ಪ್ರಸನ್ನ ಅವರೊಂದಿಗೆ ಗೌರಿಬಿದನೂರಿನಲ್ಲಿರುವ ಜಮೀನಿನಲ್ಲಿ ಕೆಲಸ ಮುಗಿಸಿ ಮತ್ತೆ ರಾಜಾನುಕುಂಟೆಗೆ ತೆರಳುವ ವೇಳೆ ಈ ಅಪಘಾತ ನಡೆದಿದೆ.
ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.