ದೊಡ್ಡಬಳ್ಳಾಪುರ: ತಾಲ್ಲೂಕಿನ ಗುಮ್ಮನಹಳ್ಳಿ ಸಮೀಪ ಭಾನುವಾರ ಸಂಜೆ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿಯಾಗಿ ಡಿಕ್ಕಿಯಾಗಿ, ಒಬ್ಬ ಮಹಿಳೆ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲ್ಲೂಕಿನ ಗುಮ್ಮನಹಳ್ಳಿ–ಲಿಂಗಧೀರನಹಳ್ಳಿ ಗೇಟ್ ನಡುವಿನ ತಿರುವಿನಲ್ಲಿ ಸ್ಕೂಟರ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೈಲಜಾ(42) ಮತ್ತು ನವೀನ್ ಕುಮಾರ್(19) ಸೇರಿ ನಾಲ್ವರು ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯಲು ವಿಳಂಬವಾಗಿದ್ದರಿಂದಾಗಿ ಶೈಲಜಾ ಅವರು ಮೃತಪಟ್ಟಿದ್ದಾರೆ.
ಶೈಲಜಾ ಮತ್ತು ನವೀನ್ ಕುಮಾರ್ ಅವರು ಮಧುಗಿರಿ ತಾಲ್ಲೂಕಿನ ಬಿಜವಾರ ಗ್ರಾಮದ ತಾಯಿ, ಮಗ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.