ಹೊಸಕೋಟೆ: ಮನೆಗೆಲಸದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಮನೆಯ ಮಾಲಿಕನನ್ನು ಪೊಲೀಸರು ಈಚೆಗೆ ಬಂಧಿಸಿದ್ದಾರೆ. ಬಾಲಕಿಯನ್ನು ರಕ್ಷಣೆ ಮಾಡಿ ಪುನರ್ವಸತಿ ಕೇಂದ್ರಕ್ಕೆ ಕಳಿಸಲಾಗಿದೆ.
ಮನೆಯಲ್ಲಿ ಕೆಲಸಕ್ಕಿದ್ದ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡ ಮನೆಯ ಮಾಲೀಕನ ವಿರುದ್ಧ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.
ಬಾಲಕಿ ತನ್ನ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯದ ವಿಷಯವನ್ನು ಅಕ್ಕಪಕ್ಕದ ಮನೆಯವರ ಬಳಿ ಹೇಳಿಕೊಂಡಿದ್ದಳು. ಒಡನಾಡಿ ಸಂಸ್ಥೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸದಸ್ಯರು ಪೊಲೀಸರೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಮನೆಯ ಮಾಲೀಕನ ವಿರುದ್ಧ ಬಾಲಕಿ ಮಾಡಿದ ಆರೋಪದಲ್ಲಿ ಸತ್ಯಾಂಶ ಕಂಡು ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಲಕಿಯನ್ನು ಮನೆಗೆಲಸಕ್ಕೆ ಇಟ್ಟುಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಮನೆಯ ಮಾಲೀಕನನ್ನು ಈಗಾಗಲೆ ಬಂಧಿಸಲಾಗಿದೆ. ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡಿರುವುದು ದೃಢಪಟ್ಟಿದೆ. ಘಟನೆ ಕುರಿತು ಮತ್ತಷ್ಟು ಮಾಹಿತಿ ಕಲೆ ಹಾಕುತ್ತಿದ್ದೇವೆ.
– ಮಲ್ಲೇಶ್, ಡಿವೈಎಸ್‌ಪಿ, ಹೊಸಕೋಟೆ ಉಪ ವಿಭಾಗ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.