ADVERTISEMENT

ಬೆಂಗಳೂರು ಗ್ರಾಮಾಂತರ ನೂತನ ಜಿಲ್ಲಾಧಿಕಾರಿಯಾಗಿ ಕೆ.ಎನ್‌. ಅನುರಾಧ ನೇಮಕ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 6:52 IST
Last Updated 27 ಫೆಬ್ರುವರಿ 2026, 6:52 IST
ಡಾ.ಕೆ.ಎನ್‌.ಅನುರಾಧ
ಡಾ.ಕೆ.ಎನ್‌.ಅನುರಾಧ   

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಡಾ.ಕೆ.ಎನ್‌.ಅನುರಾಧ ಅವರನ್ನು ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಯಾಗಿದ್ದ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿದ್ದು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ನೂತನ ಜಿಲ್ಲಾಧಿಕಾರಿ ಡಾ.ಕೆ.ಎನ್‌.ಅನುರಾಧ ಅವರಿಗೆ ವಹಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT