ದೇಶದಲ್ಲಿಯೇ ಅತಿ ದೊಡ್ಡ ಕ್ಷೇತ್ರಗಳಲ್ಲಿ ಒಂದೆನಿಸಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ. ಒಲ್ಲದ ಮನಸಿನಿಂದ ರಾಜಕೀಯ ಪ್ರವೇಶಿಸಿದ್ದ ಹೃದ್ರೋಗ ತಜ್ಞ ಡಾ. ಸಿ.ಎನ್. ಮಂಜುನಾಥ್ ಈ ಕ್ಷೇತ್ರವನ್ನು ಬಿಜೆಪಿಗೆ ತಂದುಕೊಟ್ಟಿದ್ದಾರೆ. ಸಹೋದರ, ರಾಜ್ಯಸರ್ಕಾರದ ಪ್ರಭಾವಿ ಸಚಿವ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಲದ ನಡುವೆಯೂ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಸೋಲು ಕಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.