ADVERTISEMENT

ಕುಡಿಯುವ ನೀರಿನ ಸಮಸ್ಯೆ ಗಂಭೀರ: ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳಿ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2019, 14:03 IST
Last Updated 1 ಏಪ್ರಿಲ್ 2019, 14:03 IST
ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿಚಿನ್ನಪ್ಪ ಅವರು ಎಇಇ ಸೋಮಶೇಖರಯ್ಯ ಇರುವುದು
ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿಚಿನ್ನಪ್ಪ ಅವರು ಎಇಇ ಸೋಮಶೇಖರಯ್ಯ ಇರುವುದು   

ವಿಜಯಪುರ: ಹೋಬಳಿಯ ಬಿಜ್ಜವಾರ, ಹಾರೋಹಳ್ಳಿ, ಮಂಡಿಬೆಲೆ ಗ್ರಾಮ ಪಂಚಾಯಿತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದ್ದು, ತ್ವರಿತವಾಗಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ ಸಹಾಯಕ ಎಕ್ಸಿಕ್ಯೂಟಿವ್‌ ಎಂಜಿನಿಯರ್‌ (ಎಇಇ) ಸೋಮಶೇಖರಯ್ಯ ಅವರಿಗೆ ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಕುಡಿಯುವ ನೀರಿನ ವಿಭಾಗದ ಎಇಇ ಅವರಿಗೆ ಮನವಿ ಮಾಡಿದ ಅವರು, ಮಂಡಿಬೆಲೆಯಲ್ಲಿ ನೀರಿನ ಸಮಸ್ಯೆ ಗಂಭೀರವಾಗುತ್ತಿದೆ. ಈ ಬಗ್ಗೆ ಜನರು ಪದೇ ಪದೇ ಒತ್ತಾಯ ಮಾಡುತ್ತಲೇ ಇದ್ದಾರೆ. ಆದ್ದರಿಂದ ಕೂಡಲೇ ಜಿಲ್ಲಾಧಿಕಾರಿ ಗಮನಕ್ಕೆ ತಂದು ಕ್ರಮ ಕೈಗೊಳ್ಳಬೇಕು ಎಂದರು.

ಎಇಇ ಸೋಮಶೇಖರಯ್ಯ ಮಾತನಾಡಿ, ‘ಕೊಳವೆಬಾವಿಗಳಲ್ಲಿ ದಿನೇ ದಿನೇ ನೀರಿನ ಇಳುವರಿ ಕಡಿಮೆಯಾಗುತ್ತಿದೆ. ನೀರಿನ ಕೊರತೆ ನೀಗಿಸಬೇಕು ಎಂದು ಸಾಕಷ್ಟು ಪ್ರಯತ್ನ ಮಾಡುತ್ತಿದ್ದೇವೆ. ಕೊಳವೆಬಾವಿಗಳ ಮಂಜೂರಾತಿಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದೇವೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊರೆಯಲಿಕ್ಕೆ ವಿಳಂಬವಾಗುತ್ತಿದೆ. ಶೀಘ್ರವಾಗಿ ಕ್ರಮ ಕೈಗೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.