ADVERTISEMENT

12ಕ್ಕೆ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಚಾಲನೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 2:39 IST
Last Updated 10 ಮಾರ್ಚ್ 2022, 2:39 IST

ದೇವನಹಳ್ಳಿ: ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಎಂಬ ಯೋಜನೆಯನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದ್ದು, ಮಾರ್ಚ್ 12ರಂದು ಚಾಲನೆ ನೀಡಲಾಗುವುದು.

ಅಂದು ಬೆಳಿಗ್ಗೆ 11ಗಂಟೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಅವರು ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಅದರಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾಲ್ಲೂಕು ಮಟ್ಟದಲ್ಲಿ ಸ್ಥಳೀಯ ಶಾಸಕರು ಬೆಳಿಗ್ಗೆ 11ಗಂಟೆಗೆ ಏಕಕಾಲದಲ್ಲಿ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದಡಿ ಹಳ್ಳಿಯಲ್ಲಿ ಮುಖ್ಯವಾಗಿ ಪರಿಶಿಷ್ಟ ಜಾತಿ, ಪಂಗಡದವರು ವಾಸಿಸುವ ಕಾಲೊನಿಯಲ್ಲಿನ ರೈತರ ಮನೆಗೆ ಭೇಟಿ ನೀಡಿ ಕಂದಾಯ ದಾಖಲೆಗಳನ್ನು ಖುದ್ದಾಗಿ ತಲುಪಿಸಲಾಗುತ್ತದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.