ADVERTISEMENT

ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕರ ಕಳ್ಳಸಾಗಣೆ: ವಾರದಲ್ಲಿ ₹48 ಕೋಟಿ ಗಾಂಜಾ ವಶ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 4:36 IST
Last Updated 5 ನವೆಂಬರ್ 2025, 4:36 IST
ಜಪ್ತಿ ಮಾಡಿರುವ ಹೈಡ್ರೋ ಗಾಂಜಾದ ಮಾದರಿ
ಜಪ್ತಿ ಮಾಡಿರುವ ಹೈಡ್ರೋ ಗಾಂಜಾದ ಮಾದರಿ   

ದೇವನಹಳ್ಳಿ: ಕಳೆದ ಒಂದು ವಾರದ ಅವಧಿಯಲ್ಲಿ ಬ್ಯಾಂಕಾಕ್‌ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತ್ಯೇಕವಾಗಿ ಬಂದಿಳಿದ ನಾಲ್ವರು ಪ್ರಯಾಣಿಕರಿಂದ ಕಸ್ಟಮ್ಸ್ ಅಧಿಕಾರಿಗಳು ಒಟ್ಟು 48.57 ಕೆ.ಜಿ ತೂಕದ ಗಾಂಜಾ, ಹೈಡ್ರೊ ಗಾಂಜಾ ಜಪ್ತಿ ಮಾಡಿದ್ದಾರೆ.

ಒಟ್ಟು ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಗಾಂಜಾದ ಅಂತರರಾಷ್ಟ್ರೀಯ ಮಾರುಕಟ್ಟೆಯ ಮೌಲ್ಯ ₹48 ಕೋಟಿ ಆಗಬಹುದು ಎಂದು ಅಂದಾಜಿಸಲಾಗಿದೆ.

ಅ.27 ರಿಂದ ನ.1ರವರೆಗೆ ನಡೆದ ಕಾರ್ಯಾಚರಣೆಯಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ನಾಲ್ವರು ಪ್ರಯಾಣಿಕರನ್ನು ಬಂಧಿಸಿ, ಮಾದಕ ವಸ್ತು ನಿಷೇಧ ಕಾಯ್ದೆ (ಎನ್‌ಡಿಪಿಎಸ್‌) ಅಡಿ ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಬ್ಯಾಂಕಾಕ್‌ನಿಂದ ಬರುವ ಪ್ರಯಾಣಿಕರು ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿತ್ತು. ಬ್ಯಾಂಕಾಕ್‌ ಪ್ರಯಾಣಿಕರ ಮೇಲೆ ಕಣ್ಣಿಟ್ಟಿದ್ದ ವೈಮಾನಿಕ ಗುಪ್ತಚರ ದಳದ ಅಧಿಕಾರಿಗಳಿಗೆ ವಾರದಲ್ಲಿ ದೊಡ್ಡ ಪ್ರಮಾಣದ ಗಾಂಜಾ ಜಾಲ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ತಪಾಸಣಾ ಸಿಬ್ಬಂದಿ ಕಣ್ತಪ್ಪಿಸಿ ಹೈಡ್ರೊ ಗಾಂಜಾ ಕಳ್ಳ ಸಾಗಣೆ ಮಾಡುತ್ತಿದ್ದ ಜಾಲದ ಸದಸ್ಯರು ಸೂಟ್‌ಕೇಸ್‌ ಕೆಳಭಾಗದಲ್ಲಿ ಪ್ಲಾಸ್ಟಿಕ್‌ ಕವರ್‌ಗಳಲ್ಲಿ ಗಾಂಜಾ ಬಚ್ಚಿಟ್ಟಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.