ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ಕರ್ತವ್ಯ: ಆದೇಶ ಹಿಂದಕ್ಕೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2020, 6:31 IST
Last Updated 13 ಆಗಸ್ಟ್ 2020, 6:31 IST
ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ಆದೇಶ ಪತ್ರ ಸ್ವೀಕರಿಸಿದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಪದಾಧಿಕಾರಿಗಳು
ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ಆದೇಶ ಪತ್ರ ಸ್ವೀಕರಿಸಿದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಪದಾಧಿಕಾರಿಗಳು   

ದೊಡ್ಡಬಳ್ಳಾಪುರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್-19 ಕರ್ತವ್ಯ ನಿರ್ವಹಣೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಿಕ್ಷಕರನ್ನು ನಿಯೋಜಿಸಿ ಹೊರಡಿಸಲಾಗಿದ್ದ ಆದೇಶವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಹಿಂದಕ್ಕೆ ಪಡೆದಿದ್ದಾರೆ.

ಈ ಬಗ್ಗೆ ನೀಡಿರುವ ಆದೇಶ ಪತ್ರವನ್ನು ಬಿಬಿಎಂಪಿ ವಿಶೇಷ ಆಯುಕ್ತ ಅನ್ಬುಕುಮಾರ್ ಅವರಿಂದ ಸ್ವೀಕರಿಸಿದ ರಾಜ್ಯ ಸರ್ಕಾರಿ‌ ನೌಕರರ ಸಂಘದ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್ ಮತ್ತು ಪದಾಧಿಕಾರಿಗಳು ಮಾಹಿತಿ ನೀಡಿ, ಬೆಂಗಳೂರಿನಲ್ಲಿ ವಾಸವಿದ್ದು, ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು ಅಥವಾ ಇತರೆ ಸರ್ಕಾರಿ ಇಲಾಖೆಗಳ ಅಧಿಕಾರಿಗಳನ್ನು ಮಾತ್ರ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌-19 ಕರ್ತವ್ಯ ನಿರ್ವಹಣೆಗೆ ಪಡೆಯಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ವಾಸ ಇರುವ ಶಿಕ್ಷಕರು ಅಥವಾ ಇತರೆ ಇಲಾಖೆಯ ಅಧಿಕಾರಿಗಳನ್ನು ಬಿಬಿಎಂಪಿ ವ್ಯಾಪ್ತಿಯ ಕರ್ತವ್ಯಕ್ಕೆ ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

15 ದಿನಗಳ ಹಿಂದೆಯಷ್ಟೆ ಬಿಬಿಎಂಪಿ ವತಿಯಿಂದ ತಾಲ್ಲೂಕಿನ ಶಿಕ್ಷಕರು ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳಿಗೆ ಆದೇಶ ಪತ್ರ ನೀಡಿ ಒಂದು ವಾರದ ಒಳಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್‌-19 ಕೆಲಸ ನಿರ್ವಹಣೆಗೆ ಹಾಜರಾಗಬೇಕು. ಇಲ್ಲವಾದರೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಲಾಗಿತ್ತು. ಈ ಆದೇಶವನ್ನು ರದ್ದುಗೊಳಿಸುವಂತೆ ಸರ್ಕಾರಿ ಅಧಿಕಾರಿಗಳು ಹಾಗೂ ಶಿಕ್ಷಕರು ಶಾಸಕರು ಸೇರಿದಂತೆ ಜಿಲ್ಲಾಧಿಕಾರಿಗಳವರೆಗೆ ಮನವಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.