ದೊಡ್ಡಬಳ್ಳಾಪುರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾಮಾಜಿಕ ಭದ್ರತಾ ಯೋಜನೆ ಸುರಕ್ಷಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಪಿಎಂಜೆಡಿವೈ, ಇ-ಕೆವೈಸಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಜನಸಾಮಾನ್ಯರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕೆಂದು ಆರ್‌ಬಿಐ ಪ್ರಾದೇಶಿಕ ನಿರ್ದೇಶಕಿ ಸೋನಾಲಿ ಸೇನ್ ಗುಪ್ತಾ ಹೇಳಿದರು.
ತಾಲ್ಲೂಕಿನ ಹಣಬೆ ಗ್ರಾಮ ಪಂಚಾಯಿತಿಯಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಎಸಿಬಿ ದೊಡ್ಡಬಳ್ಳಾಪುರ ಶಾಖೆಯ ನೇತೃತ್ವದಲ್ಲಿ ನಡೆದ ಜನಸುರಕ್ಷಾ ಅಭಿಯಾನದಲ್ಲಿ ಮಾತನಾಡಿದರು.
ಅಭಿಯಾನವು ಪ್ರಧಾನ ಮಂತ್ರಿ ಜನ್ ಧನ್ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಅಟಲ್ ಪಿಂಚಣಿ ಯೋಜನೆ ನಂತಹ ಪ್ರಮುಖ ಯೋಜನೆಗಳ ವ್ಯಾಪ್ತಿಯನ್ನು ಪರಿಷ್ಕರಿಸುವ ಗುರಿ ಹೊಂದಿದೆ. ಜೊತೆಗೆ ನಿಷ್ಕ್ರಿಯ ಜನ್ ಧನ್ ಯೋಜನೆ ಖಾತೆಗಳಿಗಾಗಿ ಕೆವೈಸಿ ವಿವರ ಮರು ಪರಿಶೀಲನೆ ನಡೆಸಲಿದೆ. ಕೆವೈಸಿಯನ್ನು ಕಾಲ ಕಾಲಕ್ಕೆ ನವೀಕರಿಸದಿದ್ದರೆ ಫಲಾನುಭವಿಗಳು ವಿವಿಧ ಸೌಲಭ್ಯಗಳ ಹಣ ಪಡೆಯಲು ಅಸಾಧ್ಯವಾಗುತ್ತದೆ ಎಂದು ತಿಳಿಸಿದರು.
ದೊಡ್ಡಬಳ್ಳಾಪುರ ಶಾಖೆಯ ವ್ಯವಸ್ಥಾಪಕ ವಿರೂಪಾಕ್ಷಿ ಗೌಡ, ಅಭಿಯಾನದಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು. ಜನ್ ಧನ್ ಯೋಜನೆ ಖಾತೆ ಹೊಂದಿರುವವರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದರು.
ಭಾರತೀಯ ಸ್ಟೇಟ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ವಿ.ಎನ್ ಶರ್ಮಾ, ಉಪ ಪ್ರಧಾನ ವ್ಯವಸ್ಥಾಪಕ ವೆಂಕಟರಘು ರಾಮ್, ಎಜಿಎಂ ವಿಶ್ವನಾಥ ಅಳವಂಡಿ, ಕೆನರಾ ಬ್ಯಾಂಕ್ ಉಪ ಪ್ರಧಾನ ವ್ಯವಸ್ಥಾಪಕ ಕೃಷ್ಣ ಚೈತನ್ಯ ರೆಡ್ಡಿ, ಲೀಡ್ ಬ್ಯಾಂಕ್ ಮ್ಯಾನೇಜರ್ ರಾಮಾಂಜಿ, ಕರ್ಣಾಟಕ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಭರತ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.