ADVERTISEMENT

ದೇಶದ ಅಭಿವೃದ್ಧಿಗೆ ಶಿಕ್ಷಣ ಪಾತ್ರ ಹಿರಿದು

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 2:13 IST
Last Updated 7 ಸೆಪ್ಟೆಂಬರ್ 2022, 2:13 IST
ದೊಡ್ಡಬಳ್ಳಾಪುರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಶಾಸಕ ಟಿ. ವೆಂಕಟರಮಣಯ್ಯ ಉದ್ಘಾಟಿಸಿದರು
ದೊಡ್ಡಬಳ್ಳಾಪುರದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಶಾಸಕ ಟಿ. ವೆಂಕಟರಮಣಯ್ಯ ಉದ್ಘಾಟಿಸಿದರು   

ದೊಡ್ಡಬಳ್ಳಾಪುರ: ‘ಉತ್ತಮ ಸಮಾಜ ನಿರ್ಮಾಣ ಹಾಗೂ ಪ್ರಜೆಗಳನ್ನು ಸಿದ್ಧಗೊಳಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಶಾಸಕ ಟಿ. ವೆಂಕಟರಮಣಯ್ಯ
ಹೇಳಿದರು.

ನಗರದ ಡಾ.ಬಾಬು ಜಗಜೀವನರಾಂ ಭವನದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸೋಮವಾರ ನಡೆದ ಡಾ.ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಪ್ರಗತಿಯಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ಇದರ ಮಹತ್ವವನ್ನು ನಾನು ಶಾಸಕನಾದ ಮೇಲೆ ಅರ್ಥ ಮಾಡಿಕೊಂಡಿದ್ದೇನೆ. ಇಂದು ಶಿಕ್ಷಣ ಎಲ್ಲರಿಗೂ ದೊರಕಬೇಕಿದೆ. ತಾಲ್ಲೂಕಿನಲ್ಲಿ ಈ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸ ಆಗಿವೆ ಎಂದು ತಿಳಿಸಿದರು.

ADVERTISEMENT

ಸರ್ಕಾರ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣಕ್ಕೆ ಅಗತ್ಯ ಇರುವ ಎಲ್ಲಾ ರೀತಿಯ ಆರ್ಥಿಕ ನೆರವು ನೀಡಿದೆ. ಉನ್ನತ ಶಿಕ್ಷಣಕ್ಕೂ ಹೆಚ್ಚಿನ ಅನುದಾನ ತಾಲ್ಲೂಕಿಗೆ ಬಂದಿದೆ. ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಹೊಸ ಕಟ್ಟಡ ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಪ್ರಯೋಗಾಲಯ, ಐಟಿಐ, ಸಿಇಟಿ ಕೇಂದ್ರವನ್ನು ತಾಲ್ಲೂಕಿಗೆ ತರಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಲು ಶಿಕ್ಷಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಬೇಕಿದೆ ಎಂದು ಸಲಹೆ ನೀಡಿದರು.

ಹಾಸನ ಸರ್ಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ.ಜಿ.ಪಿ. ರಾಮಣ್ಣಗೌಡ ಮಾತನಾಡಿ, ದೇಶದ ಭವಿಷ್ಯ ಶಾಲಾ ಕೊಠಡಿಗಳಲ್ಲಿ ನಿರ್ಧಾರವಾಗುತ್ತದೆ. ಈ ಮಾತಿನಂತೆ ಮಕ್ಕಳಿಗೆ ಮೌಲ್ಯಯುತ ಹಾಗೂ ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡುವ ಅಗತ್ಯವಿದೆ ಎಂದು
ತಿಳಿಸಿದರು.

ಗುರಿ ಮತ್ತು ಗುರು ಇದ್ದರೂ ನಮ್ಮ ಉದ್ದೇಶ ಅನುಷ್ಠಾನಗೊಳ್ಳದೆ ಇದ್ದರೆ ಯಾವುದೇ ಪ್ರಯೋಜನವಿಲ್ಲ. ಶಿಕ್ಷಕರು ಹೊಸ ಪಠ್ಯ ಹಾಗೂ ಪ್ರಸಕ್ತ ಬದುಕಿಗೆ ಅಗತ್ಯ ಇರುವ ಮೌಲ್ಯ ಬೆಳೆಸುವ ಕಡೆಗೆ ಆದ್ಯತೆ ನೀಡಬೇಕು ಎಂದು
ತಿಳಿಸಿದರು.

ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮೋಹನಕುಮಾರಿ, ನಗರಸಭೆ ಅಧ್ಯಕ್ಷೆ ಎಸ್‌. ಸುಧಾರಾಣಿ ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಫರ್ಹಾನಾ ತಾಜ್, ಕರ್ನಾಟಕ ರೇಷ್ಮೆ ಮಂಡಳಿ ಅಧ್ಯಕ್ಷ ಬಿ.ಸಿ. ನಾರಾಯಣಸ್ವಾಮಿ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಟಿ.ವಿ. ಲಕ್ಷ್ಮೀನಾರಾಯಣ್, ಟಿಎಪಿಸಿಎಂಎಸ್ ಅಧ್ಯಕ್ಷ ಆಂಜನಗೌಡ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಶ್ರೀನಾಥ್‌ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ರಂಗಪ್ಪ, ಕ್ಷೇತ್ರ ಸಮನ್ವಯಾಧಿಕಾರಿ ಹನುಮಂತಪ್ಪ ಬಿ. ಹಿಂದಿನಮನಿ, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುನೀಲ್‌ ನಾಯಕ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಎಚ್.ಎಸ್. ದಾಕ್ಷಾಯಿಣಿ, ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಜೈಕುಮಾರ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.