ADVERTISEMENT

‘ದಲಿತರನ್ನು ದಲಿತರಿಂದ ತುಳಿಯುವ ಪ್ರಯತ್ನ’

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2018, 12:39 IST
Last Updated 8 ಡಿಸೆಂಬರ್ 2018, 12:39 IST
ಬಹುಜನ ಸಮಿತಿ ವತಿಯಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಲಾಯಿತು
ಬಹುಜನ ಸಮಿತಿ ವತಿಯಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಪುಪ್ಪ ನಮನ ಸಲ್ಲಿಸಲಾಯಿತು   

ದೇವನಹಳ್ಳಿ: ಸಮಾಜದಲ್ಲಿ ದಲಿತರನ್ನು ದಲಿತರಿಂದಲೇ ತುಳಿಯುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಜಾ ವಿಮೊಚನಾ ಬಹುಜನ ಸಮಿತಿ ರಾಜ್ಯ ಘಟಕ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್ ಆರೋಪಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಬಹುಜನ ಸಮಿತಿ ವತಿಯಿಂದ ಅಂಬೇಡ್ಕರ್‌ ಅವರ 62ನೇ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಾಬಾ ಸಾಹೇಬ್ ನೀಡಿದ ಮೀಸಲಾತಿಯಿಂದ ಆಯ್ಕೆಗೊಳ್ಳುವ ಶಾಸಕರು, ಸಂಸದರು, ಅಧಿಕಾರ ವಹಿಸಿಕೊಂಡ ನಂತರ ಮನವಾದಿಗಳ ಕೈಗೊಂಬೆಯಾಗಿ ಬಿಡುತ್ತಾರೆ. ಬಾಬಾ ಸಾಹೇಬ್‌ರ ತತ್ವ ಸಿದ್ಧಾಂತದ ಅಡಿಯಲ್ಲಿ ಶೇ 100 ರಷ್ಟು ಕೆಲಸ ಮಾಡಲು ಸಾಧ್ಯವಾಗದಿದ್ದರೂ, ಸಾಸಿವೆ ಕಾಳಿನಷ್ಟು ಮಾಡಿ ಸಾರ್ಥಕತೆ ಪಡೆದುಕೊಳ್ಳಬೇಕು ಎಂದರು.

ADVERTISEMENT

ಸಂಘಟನೆ ನಿಜವಾಗಿ ಶೋಷಿತರಾದವರ ಪರವಾಗಿ ಹೋರಾಟ ನಡೆಸಬೇಕು ಎಂದು ತಿಳಿಸಿದರು.

ಸಮಿತಿ ರಾಜ್ಯ ಘಟಕ ಉಪಾಧ್ಯಕ್ಷ ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಚೆನ್ನಗರಾಯಪ್ಪ, ಕಾರ್ಯದರ್ಶಿ ನಯಾಜ್ ಖಾನ್, ಸಂಘಟನಾ ಕಾರ್ಯದರ್ಶಿ ಎ.ಎನ್.ಮುನಿರಾಜು, ಜಂಟಿ ಕಾರ್ಯದರ್ಶಿ ಎಂ.ಸುರೇಶ್, ರಾಜ್ಯ ಯುವ ಘಟಕ ಕಾರ್ಯದರ್ಶಿ ಮುರುಳಿ, ಪ್ರಚಾರ ಸಮಿತಿ ಅಧ್ಯಕ್ಷ ಮುನಿಕೃಷ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ರಾಮಮೂರ್ತಿ, ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ದೇವನಹಳ್ಳಿ ತಾಲ್ಲೂಕು ಘಟಕ ಅಧ್ಯಕ್ಷ ಮಧು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.