ADVERTISEMENT

ಆಷಾಢ ಏಕಾದಶಿ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2019, 13:58 IST
Last Updated 12 ಜುಲೈ 2019, 13:58 IST
ಪಾಲನಜೋಗಿಹಳ್ಳಿಯಲ್ಲಿ ಶ್ರೀಪಾಂಡುರಂಗಸ್ವಾಮಿ ದೇವಾಲಯದಲ್ಲಿ ಆಷಾಢ ಶುದ್ಧ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು
ಪಾಲನಜೋಗಿಹಳ್ಳಿಯಲ್ಲಿ ಶ್ರೀಪಾಂಡುರಂಗಸ್ವಾಮಿ ದೇವಾಲಯದಲ್ಲಿ ಆಷಾಢ ಶುದ್ಧ ಏಕಾದಶಿ ಅಂಗವಾಗಿ ವಿಶೇಷ ಅಲಂಕಾರ ಮಾಡಲಾಗಿತ್ತು   

ದೊಡ್ಡಬಳ್ಳಾಪುರ: ನಗರದ ಅಂಚಿನ ಪಾಲನಜೋಗಿಹಳ್ಳಿಯಲ್ಲಿನ ಶ್ರೀಪಾಂಡುರಂಗಸ್ವಾಮಿ ದೇವಾಲಯದಲ್ಲಿ ಶ್ರೀ ಪಾಂಡುರಂಗಸ್ವಾಮಿ ಭಕ್ತ ಮಂಡಳಿ ವತಿಯಿಂದ ಆಷಾಢ ಶುದ್ಧ ಏಕಾದಶಿ ಅಂಗವಾಗಿ 60ನೇ ವರ್ಷದ ಏಕಾದಶಿ ವಿಶೇಷ ಪೂಜೆ ವಿಜೃಂಭಣೆಯಿಂದ ನೆರವೇರಿತು.

ಬೆಳಿಗ್ಗೆ ಪಾಂಡುರಂಗಸ್ವಾಮಿಗೆ ಪಂಚಾಮೃತಾಭಿಷೇಕ ನಡೆಯಿತು. ಪಾಂಡುರಂಗಸ್ವಾಮಿ ಹಾಗೂ ಆಂಜನೇಯ ಸ್ವಾಮಿಯವರ ಬೆಳ್ಳಿ ರಥದ ಹೂವಿನ ಪಲ್ಲಕ್ಕಿ ಉತ್ಸವ ವೀರಗಾಸೆ, ಡೊಳ್ಳು ಕುಣಿತ ಉತ್ಸವಗಳೊಂದಿಗೆ ಸುರಭಿ ಭಜನಾ ಮಂಡಲಿಯಿಂದ ವಿಷ್ಣು ಸಹಸ್ರನಾಮ ಪಾರಾಯಣ, ಭರತನಾಟ್ಯ, ಭಕ್ತಿಗೀತೆ,ಭಜನೆ ಹಾಗೂ ಅಖಂಡ ಭಜನೆ, ಮಂಜುಶ್ರೀ ಮೆಲೋಡಿಸ್ ಅವರಿಂದ ಭಕ್ತಿಗೀತೆಗಳ ವಾದ್ಯಗೋಷ್ಠಿ ಸಂಭ್ರಮದಿಂದ ನಡೆಯಿತು.

ಸಹಸ್ರಾರು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು. ಪ್ರಥಮ ಏಕಾದಶಿ ಅಂಗವಾಗಿ ನಗರದ ಬೆಸ್ತರಪೇಟೆಯಲ್ಲಿರುವ ಪಾಂಡುರಂಗಸ್ವಾಮಿ ದೇವಾಲಯದಲ್ಲಿ ವಿಶೇಷ ಅಲಂಕಾರ ಹಾಗೂ ಪೂಜೆ ನೆರವೇರಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.