ADVERTISEMENT

ಶಿಕ್ಷಕರ ಕ್ಷೇತ್ರ ಚುನಾವಣೆ: ನ.5 ರವರೆಗೆ ನೀತಿ ಸಂಹಿತೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 1:59 IST
Last Updated 2 ಅಕ್ಟೋಬರ್ 2020, 1:59 IST

ದೇವನಹಳ್ಳಿ: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಚುನಾವಣಾ ಕ್ಷೇತ್ರದ ವ್ಯಾಪ್ತಿಯಾದ ಜಿಲ್ಲೆಯಲ್ಲಿ ಸೆ. 29ರಿಂದ ನ. 5 ರವರೆಗೆ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್‌ ತಿಳಿಸಿದ್ದಾರೆ.

ಚುನಾವಣಾ ಕಾರ್ಯಸೂಚಿಯಂತೆ ಅ 1, 2020 ರಂದು ಅಧಿಸೂಚನೆ ಹೊರಡಿಸಲಾಗಿದೆ. ಅ. 8, 2020ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ. ಅ. 9, 2020ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಅ. 12, 2020ರಂದು ಕೊನೆಯ ದಿನಾಂಕ. ಅ. 28ರಂದು ಮತದಾನದ ನಡೆಯಲಿದೆ. ನ. 2ರಂದು ಮತಗಳ ಎಣಿಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ನ. 5ರಂದು ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT