ADVERTISEMENT

ಚನ್ನರಾಯಪಟ್ಟಣ, ನಲ್ಲೂರು ಗ್ರಾಮ ಪಂಚಾಯಿತಿಗೆ ಚುನಾವಣೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 6:10 IST
Last Updated 30 ನವೆಂಬರ್ 2021, 6:10 IST
ವಿಜಯಪುರದ ಗಾಂಧಿ ಚೌಕದಲ್ಲಿ ಸಮೃದ್ಧಿ ಗಣಪತಿ ಕನ್ನಡ ಯುವಕ ಸಂಘದಿಂದ ಸೋಮವಾರ ಆಯೋಜಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು
ವಿಜಯಪುರದ ಗಾಂಧಿ ಚೌಕದಲ್ಲಿ ಸಮೃದ್ಧಿ ಗಣಪತಿ ಕನ್ನಡ ಯುವಕ ಸಂಘದಿಂದ ಸೋಮವಾರ ಆಯೋಜಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಗಣ್ಯರನ್ನು ಸನ್ಮಾನಿಸಲಾಯಿತು   

ವಿಜಯಪುರ: ಅವಧಿ ಮುಕ್ತಾಯವಾಗಿರುವ ಚನ್ನರಾಯಪಟ್ಟಣ ಹೋಬಳಿಯ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯ 15 ಸ್ಥಾನಗಳು ಹಾಗೂ ನಲ್ಲೂರು ಗ್ರಾಮ ಪಂಚಾಯಿತಿಯ 15 ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದೆ.

ಡಿ. 13ರಂದು ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಲಿದ್ದಾರೆ. ನಾಮಪತ್ರ ಸಲ್ಲಿಸಲು ಡಿ. 17 ಕೊನೆಯ ದಿನ. ನಾಮಪತ್ರಗಳ ಪರಿಶೀಲನೆಯು ಡಿ. 18ರಂದು ನಡೆಯಲಿದೆ. ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಡಿ. 20 ಅಂತಿಮ ದಿನ. ಡಿ. 27ರಂದು ಮತದಾನ ನಡೆಯಲಿದೆ. ಮರು ಮತದಾನವು ಅವಶ್ಯವಿದ್ದರೆ ಡಿ .29ರಂದು ನಡೆಯಲಿದೆ. ಡಿ. 30ರಂದುಮತ ಎಣಿಕೆ ನಡೆಯಲಿದೆ. ಡಿ. 13 ರಿದ 30ರ ವರೆಗೆ ಚುನಾವಣೆ ನಡೆಯುವ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನೀತಿಸಂಹಿತೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT