ADVERTISEMENT

ಹೊಸಕೋಟೆ: ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2020, 3:55 IST
Last Updated 29 ಅಕ್ಟೋಬರ್ 2020, 3:55 IST
ಹೊಸಕೋಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್ ಅವರು ಸೂಲಿಬೆಲೆ ಪಟ್ಟಣದ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಲೋಟಗಳನ್ನು ವಶಕ್ಕೆ ಪಡೆದರು
ಹೊಸಕೋಟೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುನಾಥ್ ಅವರು ಸೂಲಿಬೆಲೆ ಪಟ್ಟಣದ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ಲೋಟಗಳನ್ನು ವಶಕ್ಕೆ ಪಡೆದರು   

ಹೊಸಕೋಟೆ: ಹೊಸಕೋಟೆ ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷಸ್ಥಾನದ ಚುನಾವಣೆಯು ಅಕ್ಟೋಬರ್ 28ರಂದು ಮಧ್ಯಾಹ್ನ 1 ಗಂಟೆಗೆ ನಿಗದಿಯಾಗಿದೆ.

ಚುನಾವಣೆಯಲ್ಲಿ ಬಿಜೆಪಿ ಬಹುಮತಗಳಿಸಿದ್ದರೂ ಆಡಳಿತದ ಚುಕ್ಕಾಣಿ ಹಿಡಿಯಲು ಕಾಯಬೇಕಾಯಿತು. ಒಟ್ಟು 31 ಸ್ಥಾನಗಳ ನಗರಸಭೆಯಲ್ಲಿ ಬಿಜೆಪಿ 23 ಸ್ಥಾನ, 7 ಸ್ಥಾನಗಳಲ್ಲಿ ಶಾಸಕ ಶರತ್ ಬಚ್ಚೇಗೌಡರ ಬೆಂಬಲಿಗರು ಹಾಗೂ 1 ಸ್ಥಾನದಲ್ಲಿ ಎಸ್‌ಡಿಪಿಐ ಗೆದ್ದಿತ್ತು. ಅಧ್ಯಕ್ಷ ಸ್ಥಾನ ಸಾಮಾನ್ಯ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದರೂ ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ.ನಾಗರಾಜ್ ಅಭಿಪ್ರಾಯವೇ ಅಂತಿಮವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT